|
ಕರ್ನಾಟಕದಲ್ಲಿನ್ನು ಕನ್ನಡದಲ್ಲೇ ಸಮನ್ಸ್
ಬೆಂಗಳೂರು: ಕರ್ನಾಟಕದ ಎಲ್ಲಾ ನ್ಯಾಯಾಲಯಗಳಲ್ಲಿ
ಇನ್ನು ಮುಂದೆ ಕನ್ನಡದಲ್ಲೇ ಸಮನ್ಸ್ ಜಾರಿಮಾಡಲಾಗುತ್ತದೆ
ಎಂದು ಬೆಂಗಳೂರಿನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ
ಉಚ್ಚನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಸಿರಿಯಾಕ್ ಜೋಸೆಫ್
ತಿಳಿಸಿದ್ದಾರೆ.
ಉಚ್ಚ ನ್ಯಾಯಾಲಯದಲ್ಲಿ ಕನ್ನಡ ಬಳಕೆಗೆ ಎಲ್ಲಾ ಏರ್ಪಾಡುಗಳನ್ನು
ಮಾಡಲಾಗುತ್ತಿದೆ. ಕೆಳ ನ್ಯಾಯಾಲಯಗಳಲ್ಲಿ ಕನ್ನಡದಲ್ಲೇ
ಆಡಳಿತ ನಡೆಸಲು ಸಹಾಯವಾಗಲು ಕನ್ನಡ ತಂತ್ರಾಂಶ ಅಭಿವೃದ್ಧಿ
ಪಡಿಸುವ ಸಲುವಾಗಿ ಗಣಕೀಕರಣ ಸಮಿತಿಯನ್ನು ರಚಿಸಲಾಗಿದೆ ಎಂದು
ಹೇಳಿದರು.
ಕರ್ನಾಟಕ ಉಚ್ಚನ್ಯಾಯಾಲಯ ಕೂಡಾ ತನ್ನ ಸುವರ್ಣೋತ್ಸವ
ಆಚರಿಸುತ್ತಿದ್ದು, ಈ ಸಂದರ್ಭದಲ್ಲಿ ವಿಚಾರ ಸಂಕಿರಣಗಳು,
ಕಾರ್ಯಾಗಾರಗಳು, ವಿಶೇಷ ಉಪನ್ಯಾಸಗಳು ಮತ್ತು ಲೋಕ
ಅದಾಲತ್‌ಗಳನ್ನು ಏರ್ಪಡಿಸಲಾಗಿತ್ತು ಎಂದು ಜೋಸೆಫ್ ವಿವರಿಸಿದರು.
ಇನ್ನಷ್ಟು
ಸರ್ಫ್ ಸಾಮಾಜಿಕ ದೇಣಿಗೆ ಅಭಿಯಾನ ಪ್ರಾರಂಭ
ಮದ್ದು ಸೇವಿಸಿ ನಿಷೇಧಕ್ಕೊಳಗಾದ ಅಖ್ತರ್, ಆಸೀಫ್
ನ. ೯ರಂದು ಹೊಸ ಕೃಷಿನೀತಿಗೆ ಒಪ್ಪಿಗೆ
`ಸಾಣೆಹಳ್ಳಿಯ ರಂಗ ಸುಗ್ಗಿ' ಗೆ ಚಾಲನೆ
ನ.೧೬ರಿಂದ ಹೆಲ್ಮೆಟ್ ಕಡ್ಡಾಯ
ರಾಜ್ಯದಲ್ಲಿ ಸುವರ್ಣ
ಸಂಭ್ರಮದ ಆಚರಣೆ
ಹೈ-ಕ ಗಡಿಯಲ್ಲಿ
ನ.೧ರಂದು ಕಪ್ಪು ದಿನಾಚರಣೆ
ಸನ್ ಟಿವಿ ಯಿಂದ ೩ ಹೊಸ
ಎಫ್‌ಎಂ ವಾಹಿನಿ
ರಾಜ್ಯದಲ್ಲಿ ನಾಲ್ಕು ಆರ್ಥಿಕ ವಲಯಗಳ ಸ್ಥಾಪನೆ
|