ಆಗಸ್ಟ್೩ಕ್ಕೆ ಹೊಸ ಲೋಕಾಯುಕ್ತರ ಪ್ರಮಾಣವಚನ
ಬೆಂಗಳೂರು :
ರಾಜ್ಯದ ನೂತನ ಲೋಕಾಯುಕ್ತರಾಗಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಸಂತೋಷ
ಹೆಗ್ಡೆ ಆಗಸ್ಟ್ ೩ರಂದು ಗುರುವಾರ ಅಧಿಕಾರ ಸ್ವೀಕರಿಸಲಿದ್ದಾರೆ.
ಅಂದು ಬೆಳಗ್ಗೆ ಹೊಸ
ಲೋಕಾಯುಕ್ತ ಸಂತೋಷ್ ಹೆಗ್ಡೆಗೆ ರಾಜಭವನದಲ್ಲಿ ರಾಜ್ಯಪಾಲ ಟಿ.ಎನ್.ಚತುರ್ವೇದಿ ಪ್ರಮಾಣ
ವಚನ ಬೋಧಿಸಲಿದ್ದಾರೆ.
ರಾಜ್ಯದ ಅಡ್ವೊಕೇಟ್
ಜನರಲ್ ಆಗಿ ಕಾರ್ಯನಿರ್ವಹಿಸಿದ ಬಳಿಕ ೧೮ ವರ್ಷಗಳ ಹಿಂದೆಯೇ ಸುಪ್ರೀಂ ಕೋರ್ಟ್‌ನಲ್ಲಿ
ಅವರು ವೃತ್ತಿ ಆರಂಭಿಸಿದ್ದರು. ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ಆಗಿ ಸೇವೆ
ಸಲ್ಲಿಸಿದ್ದ ಹೆಗ್ಡೆ, ನೇರವಾಗಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದರು.