Fonts Problem?

Downloads

Wallpapers

Vikrantakarnataka Weekly

 

 

ಮುಖ ಪುಟ

ಸುದ್ದಿ-ಸದ್ದು

ಎನ್ನಾರೈ

ಸಾಹಿತ್ಯ-ಸಂದರ್ಭ

ಚಿತ್ರ ವಿಚಿತ್ರ

ಚಿತ್ರ ಶಾಲೆ

ಒಕ್ಕಲುತನ

ವೆಬ್ ಲಿಂಕ್ಸ್

ಪಾಕ ಶಾಲೆ

ಆಟ ಬೊಂಬಾಟ

ನಗೆ ಬುಗ್ಗೆ

ನಿಮ್ಮ ಓಲೆ

Google    

ವೆಬ್

ವಿಕ್ರಾಂತ ಕರ್ನಾಟಕ

 

Friday, 01 September 2006 03:31 PM

ನಾಡಹಬ್ಬದ ಉದ್ಘಾಟನೆಗೆ ಸಾಹಿತಿ ಜಿ. ನಾರಾಯಣ್

`ಈ ಆಹ್ವಾನ ಸಂತಸ ತಂದಿದೆ'

 

ಮೈಸೂರು : ಹಿರಿಯ ಗಾಂಧಿವಾದಿ, ಸಾಹಿತಿ ಜಿ. ನಾರಾಯಣ ಈ ಬಾರಿಯ ನಾಡಹಬ್ಬ ದಸರಾ ಉದ್ಘಾಟಿಸಲಿದ್ದಾರೆ.

 

ಸೆಪ್ಟೆಂಬರ್ ೨೩ರಂದು ದಸರಾ ಉದ್ಘಾಟನೆ ನಡೆಯಲಿದೆ. ಇದಕ್ಕಾಗಿ ಎಲ್ಲ ಸಿದ್ಧತೆಗಳೂ ಮೈಸೂರಿನಲ್ಲಿ ಭರದಿಂದ ನಡೆಯುತ್ತಿದೆ. ಅದ್ಧೂರಿ ದಸರಾ ಆಚರಣೆ ನಡೆಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಶುಕ್ರವಾರ ಹೇಳಿದ್ದಾರೆ.

 

ಅವರು ಮೈಸೂರಿನಲ್ಲಿ ಮಹಾರಾಣಿ ಕಾಲೇಜು ಮತ್ತು ಸರಕಾರಿ ರಾಂ ನಾರಾಯಣ್ ಚೆಲ್ಲಾರಾಂ ಕಾಲೇಜುಗಳ ನೂತನ ಕಟ್ಟಡಗಳಿಗೆ ಶಂಕುಸ್ಥಾಪನೆ ನಡೆಸಿ ಮಾತನಾಡುತ್ತಿದ್ದರು.

 

ದಸರಾ ಹಬ್ಬ ಉದ್ಘಾಟನೆಯ ಆಹ್ವಾನದ ಬಗ್ಗೆ ಜಿ. ನಾರಾಯಣ್ ಸಂತಸ ವ್ಯಕ್ತಪಡಿಸಿದ್ದು, ನಾಡಹಬ್ಬ ಉದ್ಘಾಟಿಸುವುದು ನನ್ನ ಕರ್ತವ್ಯವೆಂದು ಭಾವಿಸುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.

Print This PagePrint this page

 

Email this Page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com