ಮಹಾರಾಣಿ ಕಾಲೇಜಿನಲ್ಲಿ ಎಂಬಿಎ, ಎಂಸಿಎ
ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಹುಡುಗಿಯರಿಗೆ ಉನ್ನತ ವ್ಯಾಸಂಗಕ್ಕೆ
ಅನುಕೂಲವಾಗಲೆಂದು ಮುಂದಿನ ಶೈಕ್ಷಣಿಕ ವರ್ಷದಿಂದ ಮಹಾರಾಣಿ
ಕಾಲೇಜಿನಲ್ಲಿ ಎಂಬಿಎ ಹಾಗೂ ಎಂಸಿಎ ಕೋರ್ಸ್ ಗಳನ್ನು ಪ್ರಾರಂಭಿಸಲಾಗುವುದು
ಎಂದು ಮುಖ್ಯಮಂತ್ರಿಗಳು ಹೇಳಿದರು.
ಮಹಾರಾಣಿ
ಕಲೆ ಮತ್ತು ವಾಣಿಜ್ಯ ಕಾಲೇಜಿನಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆಶಂಕುಸ್ಥಾಪನೆ
ಮಾಡಿದ ನಂತರ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಈ ವಿಷಯ
ತಿಳಿಸಿದ್ದಾರೆ.
ಜಿಲ್ಲೆಯಲ್ಲಿರುವ ೬೮ ತಾಲ್ಲೂಕಿನಲ್ಲಿ ಪದವಿ ಕಾಲೇಜಿನ ಕೊರತೆಯಿದ್ದು,
ಶ್ರೀಘ್ರವಾಗಿ ಈ ಬಗ್ಗೆ ಗಮನಹರಿಸಲಾಗುವುದು ಹಾಗೂ ವಿದ್ಯಾರ್ಥಿಗಳ ಸುರಕ್ಷಿತೆಗಾಗಿ
ರಸ್ತೆ ದಾಟಲು ಅನುಕೂಲವಾಗುವಂತೆ ಒಂದು ಮೇಲ್ಸೇತುವೆ ನಿರ್ಮಿಸಲು
ಬಿಡಿಎ ಹಾಗೂ ಬಿಎಂಪಿಗೆ ನಿರ್ದೇಶಿಸಲಾಗುವುದು ಎಂದು ಮುಖ್ಯಮಂತ್ರಿ ಭರವಸೆ
ನೀಡಿದ್ದಾರೆ.