೨೪ ನರ್ಸಿಂಗ್ ಕಾಲೇಜು ಆರಂಭಕ್ಕೆ ಅನುಮತಿ
ಬೆಂಗಳೂರು:
ರಾಜ್ಯದಲ್ಲಿ ಹೊಸದಾಗಿ ೨೪ ಖಾಸಗಿ ನರ್ಸಿಂಗ್ ಕಾಲೇಜುಗಳನ್ನು ತೆರೆಯಲು ರಾಜ್ಯ ಸರ್ಕಾರ
ಅನುಮತಿ ನೀಡಿದೆ.

ಉಪಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದ ಉಪಸಮಿತಿ ಸಭೆಯಲ್ಲಿ ಈ ತೀರ್ಮಾನ
ತೆಗೆದುಕೊಳ್ಳಲಾಯಿತು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ವಿ.ಎಸ್.ಆಚಾರ್ಯ ಸುದ್ದಿಗಾರರಿಗೆ
ತಿಳಿಸಿದ್ದಾರೆ.
ಕಳೆದ ಎರಡು
ವರ್ಷಗಳ ಹಿಂದೆ ಅರ್ಜಿ ಹಾಕಿಕೊಂಡ ಖಾಸಗಿಯವರಿಗೆ ನರ್ಸಿಂಗ್ ಕಾಲೇಜು ಆರಂಭಿಸಲು ಅನುಮತಿ
ನೀಡಲಾಗಿದ್ದು, ಇದಕ್ಕೆ ನರ್ಸಿಂಗ್ ಕೌನ್ಸಿಲ್ ಆಫ್ ಇಂಡಿಯಾ ಅನುಮೋದನೆ ನೀಡಬೇಕಾಗಿದೆ
ಎಂದು ಅವರು ಸ್ಪಷ್ಟಪಡಿಸಿದ್ದಾರೆ.