Fonts Problem?

Downloads

Wallpapers

Vikrantakarnataka Weekly

ಪತ್ರಿಕೆ ಬಿಡುಗಡೆ

DU 17 gAz wP0i qUq igAs

Monday, 04 September 2006 04:46 PM

ಬಡವರಿಗೆ ಕಡಿಮೆ ದರದಲ್ಲಿ ಮನೆ-ನಿವೇಶನ

ಬಡವರಿಗೆ ಸ್ವಾತಂತ್ರೋತ್ಸವದ ಗಿಫ್ಟ್

 

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಕಡು ಬಡವರಿಗೆ ಕಡಿಮೆ ದರದಲ್ಲಿ ಮನೆ-ನಿವೇಶನ ಒದಗಿಸುವ ವಸತಿ ಯೋಜನೆಯನ್ನು ಸ್ವಾತಂತ್ರ್ಯ ದಿನದಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಕಟಿಸಲಿದ್ದಾರೆ.

 

ಈ ಯೋಜನೆಯಲ್ಲಿ ಬೆಂಗಳೂರಿನ ಬಡತನ ರೇಖೆಗಿಂತ ಕೆಳಗಿರುವ ಕಡು ಬಡವರಿಗೆ ೫೦ ಸಾವಿರ ನಿವೇಶನ ಹಾಗೂ ಒಂದು ಲಕ್ಷ ಫ್ಲಾಟ್ ಮಾದರಿಯ ಮನೆಗಳನ್ನು ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ.

 

ಬಿ.ಡಿ.ಎ, ಗೃಹಮಂಡಳಿ, ಕೊಳಚೆ ನಿರ್ಮೂಲನಾ ಮಂಡಳಿ, ಬೆಂಗಳೂರು ಮಹಾನಗರ ಪಾಲಿಕೆ ಸಂಯುಕ್ತ ಆಶ್ರಯದಲ್ಲಿ ಈ ಯೋಜನೆಯನ್ನು ಆರಂಭಿಸಲಾಗುವುದು.

 

ಆಟೋ ಚಾಲಕರು, ಕಡಿಮೆ ಆದಾಯದ ಉದ್ಯೋಗಸ್ಥರಿಗೆ ಸ್ವಂತ ಮನೆ ನೀಡುವ ಉದ್ದೇಶವಿಟ್ಟುಕೊಂಡು ರೂಪಿಸಲಾದ ಈ ಯೋಜನೆ ಕೇವಲ ಬೆಂಗಳೂರಿಗೆ ಸೀಮಿತವಾಗಿರದೆ ರಾಜ್ಯದ ಎಲ್ಲಾ ಜಿಲ್ಲಾ-ತಾಲ್ಲೂಕು ಕೇಂದ್ರಗಳಿಗೂ ಅನ್ವಯವಾಗಲಿದೆ.

Print This PagePrint this page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com