ರಾಜ್ಯದಲ್ಲಿಗಣಿಗಾರಿಕೆ ಸ್ಥಗಿತಕ್ಕೆ ಪ್ರಧಾನಿಗೆ ಪತ್ರ
ಬೆಂಗಳೂರು :
ರಾಜ್ಯದಲ್ಲಿ ಗಣಿಗಾರಿಕೆಯನ್ನು ಸಂಪೂರ್ಣ ನಿಲ್ಲಿಸುವ ಕುರಿತು ಚಿಂತನೆ ನಡೆಸುತ್ತಿರುವ ಸರಕಾರ
ಈ ಸಂಬಂಧ ಕೇಂದ್ರಕ್ಕೆ ಪತ್ರ ಬರೆಯಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ
ಹೇಳಿದ್ದಾರೆ.
ಗಣಿಗಾರಿಕೆ ಸ್ಥಗಿತಗೊಳಿಸುವ ವಿಚಾರದಲ್ಲಿ ಇರುವ ತೊಡಕನ್ನು ನಿವಾರಿಸಲು ಪ್ರಧಾನಿ ಮನಮೋಹನ್
ಸಿಂಗ್ ಅವರಿಗೆ ಮನವಿ ಮಾಡಲಾಗುವುದು. ಅಲ್ಲದೇ ಅಕ್ರಮ ಗಣಿಗಾರಿಕೆ ನಡೆದಿರುವ ಬಗ್ಗೆ
ಯಾವುದೇ ತನಿಖೆ ನಡೆಸಲು ಸರ್ಕಾರ ಸಿದ್ಧವಾಗಿದೆ ಎಂದು ತಮ್ಮ ವಿರುದ್ಧ ಮಾಡಲಾದ
ಆರೋಪದ ಬಗ್ಗೆ ಚರ್ಚೆಯಲ್ಲಿ ಪಾಲ್ಗೊಳ್ಳುತ್ತಾ ಅವರು ಹೇಳಿದರು.
ಆದರೆ ಅಕ್ರಮ
ಗಣಿಗಾರಿಕೆಯ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂಬ ವಿರೋಧ ಪಕ್ಷದವರ
ಒತ್ತಾಯವನ್ನು ಮುಖ್ಯಮಂತ್ರಿಯವರು ಸರಾಸಗಟಾಗಿ ತಿರಸ್ಕರಿಸಿದ್ದಾರೆ.