Fonts Problem?

Downloads

Wallpapers

Vikrantakarnataka Weekly

ಪತ್ರಿಕೆ ಬಿಡುಗಡೆ

DU 17 gAz wP0i qUq igAs

Monday, 04 September 2006 04:45 PM

ಬೆಂಗಳೂರುವಿವಿಯಿಂದ ಪಿಹೆಚ್‌ಡಿ ಅರ್ಜಿ ಆಹ್ವಾನ

ಬೆಂಗಳೂರು : ಬೆಂಗಳೂರು ವಿಶ್ವ ವಿದ್ಯಾಲಯವು ಪಿಹೆಚ್.ಡಿ ಅಧ್ಯಯನಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ.

 

ಶುಕ್ರವಾರ ನಡೆದ ಅಕಾಡೆಮಿಕ್ ಕೌನ್ಸಿಲ್‌ನಲ್ಲಿ ಪಿಹೆಚ್.ಡಿಗೆ ಅರ್ಜಿಗಳನ್ನು ಆಹ್ವಾನಿಸಲು ನಿರ್ಧರಿಸಲಾಗಿದ್ದು ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಅರ್ಜಿಗಳನ್ನು ಕರೆಯಲಾಗುವುದು. ವಿಶ್ವವಿದ್ಯಾನಿಲಯದಲ್ಲಿ ಮಾರ್ಗದರ್ಶಕರ ಕೊರತೆಯಿದ್ದು, ಆಗಸ್ಟ್ ತಿಂಗಳಂತ್ಯದಲ್ಲಿ ಈ ಕೊರತೆಯನ್ನು ತುಂಬಲಾಗುವುದು ಎಂದು ಬೆಂಗಳೂರು ವಿವಿಯ ಉಪಕುಲಪತಿ ಡಾ. ಎಚ್. ಎ. ರಂಗನಾಥ್ ತಿಳಿಸಿದ್ದಾರೆ.

 

೨೦೦೫ ನೇ ಇಸವಿಯ ಮೇ ತಿಂಗಳಲ್ಲಿ ಪಿಹೆಚ್.ಡಿಗೋಸ್ಕರ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಅಧ್ಯಯನಕ್ಕಾಗಿ ತಮ್ಮ ಯೋಜನೆಗಳನ್ನು ಸಿದ್ಧಪಡಿಸಿಕೊಂಡು ಕಾಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಹೊತ್ತಿಗೆ ಪಿಹೆಚ್.ಡಿ ಅಧ್ಯಯನಕ್ಕಾಗಿ ಹೊಸ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಉಪಕುಲಪತಿ ತಿಳಿಸಿದ್ದಾರೆ.

Print This PagePrint this page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com