Fonts Problem?

Downloads

Wallpapers

Vikrantakarnataka Weekly

ಪತ್ರಿಕೆ ಬಿಡುಗಡೆ

DU 17 gAz wP0i qUq igAs

Monday, 04 September 2006 04:45 PM

ರಾಜ್ಯ ರೈತರಿಗೆ ಕೇಂದ್ರದಿಂದ ವಿಶೇಷ ಪ್ಯಾಕೇಜ್

ನವದೆಹಲಿ : ರೈತರ ಆತ್ಮಹತ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ಆಂಧ್ರ ಪ್ರದೇಶ, ಕೇರಳ ರಾಜ್ಯಗಳಿಗೆ ಕೇಂದ್ರ ಸರ್ಕಾರ ವಿಶೇಷ ಪ್ಯಾಕೇಜ್ ಸಿದ್ಧಪಡಿಸಲು ನಿರ್ಧರಿಸಿದೆ.

 

ಕೇಂದ್ರ ಹಣಕಾಸು ಸಚಿವ ಪಿ.ಚಿದಂಬರಂ, ಕೃಷಿ ಸಚಿವ ಶರದ್ ಪವಾರ್ ಸಂಸತ್ತಿನಲ್ಲಿ ಶುಕ್ರವಾರ ಈ ವಿಷಯ ಪ್ರಕಟಿಸಿದ್ದಾರೆ.

 

ಮಹಾರಾಷ್ಟ್ರದ ವಿದರ್ಭ ಮಾದರಿಯಲ್ಲಿಯೇ ಈ ಮೂರು ರಾಜ್ಯಗಳ ರೈತರಿಗೆ ಪರಿಹಾರ ನೀಡಲು ವಿಶೇಷ ಪ್ಯಾಕೇಜ್‌ನಲ್ಲಿ ತೀರ್ಮಾನಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

 

ರಾಜ್ಯದ ಬೆಳಗಾವಿ, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ವಿಶೇಷ ಪ್ಯಾಕೇಜ್‌ನಡಿಯಲ್ಲಿ ಪರಿಹಾರ ದೊರಕಲಿದ್ದು ಕೃಷಿ ಸಾಲ ನೀಡಲು ನಿರಾಕರಿಸುವ ಬ್ಯಾಂಕುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

Print This PagePrint this page

ಮುಖಪುಟ

Copyright Vikranta Prakashana 2006. All rights reserved.
Site best viewed in 800x600 resolution.

Email : feedback@vikrantakarnataka.com